shruthi

shruthi

Saturday 7 July 2012

ಮನಸ್ಸು ನೆರೆದಾಗ.!!

ಮನಸ್ಸು ನೆರೆದಾಗ
ಮಜ್ಜಿಗೆಯ ಹುಳಿ,
ಕಾಡುತಿವೆ ಅಮ್ಮನ ತುತ್ತು,
ಮರೆತ ಮುತ್ತು

ಬಾಲ್ಯ ಇನ್ನು ಕನಸಂತೆ,
ಮನದ ತುಂಬಾ ಚಿಂತೆಗಳ ಸಂತೆ
ಬರೀ ಸ್ವಾರ್ಥದ  ಜಾಗಟೆ,
ಹಣದ ತಮಟೆಯ ಸದ್ದು

ಸ್ಥಾನ ಮಾನಗಳ  ಗುದ್ದಾಟ
ತೃಪ್ತಿ  ಅತೃಪ್ತಿಗಳ ಎಳೆದಾಟ ,ಸೆಳೆದಾಟ
ಭಾವ ಸ್ಮಶಾನದಲ್ಲಿ ಅಲೆದಾಟ
ಆಗಾಗ ಉಮ್ಮಳಿಸುವ  ದುಃಖ
ಕಣ್ಣೋರಿಸಿದ  ಕೈಗಳ ನೆನಪು

ಸಂಬಂಧಗಳೆಲ್ಲ ಬೇಡಿಗಳೆನಿಸಿ,
ದ್ವಂದ್ವಗಳ ,ದೈವದಾಟಗಳ
ಹೊಕ್ಕು ಹೊರ ಬರುವಮುನ್ನ
ಆತ್ಮ ಸಂವಿಧಾನದಲ್ಲಿ ಹಲವು ತಿದ್ದುಪಡಿ

ಆಸೆ ಕನಸುಗಳ ಒತ್ತುವರಿ,
ಹುಡುಕುತ್ತಲೊಂದು ಗೊತ್ತುಗುರಿ
ಕಾಣುವ ಮುಂಚೆ ಭಾವಸ್ರಾವ!!
-ಶೃತಿ

2 comments:

  1. ನೆನಪಿನಂಗಳದಲ್ಲಿ ಕೆಲ ಚಿತಗಳೇ ಹಾಗೆ, ಹೇಳಿಕೊಳ್ಳಲೂ ಆಗದ ಭಾವಸ್ರಾವಗಳೇ...

    ನನ್ನ ಬ್ಲಾಗಿಗೂ ಬನ್ನಿರಿ.
    www.badari-poems.blogspot.com

    ReplyDelete
  2. ಹಾಯ್ ಶ್ರುತಿ....

    ವಾವ್ ...ಸುಂದರ ಕವನ...ಎಲ್ಲಾ ಸಾಲುಗಳು ಇಷ್ಟವಾದವು....

    ReplyDelete